HomeKarnatakaBREAKING: ಬಿರುಗಾಳಿ ಸಹಿತ ಭಾರಿ ಮಳೆ; ವಾಹನ ಸವಾರರ ಪರದಾಟ

BREAKING: ಬಿರುಗಾಳಿ ಸಹಿತ ಭಾರಿ ಮಳೆ; ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ದೇವನಹಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹೆದ್ದಾರಿಯಲ್ಲಿ ನೀರು ತುಂಬಿ ಹರಿಯುತ್ತಿದೆ. ಬೈಕ್, ಕಾರುಗಳು ನೀರಿನಲ್ಲಿ ಮುಳುಗಿದ್ದು, ಹಲವೆಡೆಗಳಲ್ಲಿ ರಸ್ತೆ ನದಿಯಂತಾಗಿದ್ದು, ವಾಹನ ಸಂಚರಿಸಲು ಸಾಧ್ಯವಾಗದೇ ವಾಹನ ಸವಾರರು ನಿಂತಲ್ಲೇ ನಿಂತಿದ್ದು ಟ್ರಾಫಿಕ್ ಜಾಮ್ ಸಂಭವಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular