ಬೆಂಗಳೂರು : ಕೊರೊನಾ ಹೆಚ್ಚಳ ಹಿನ್ನೆಲೆ ಸರ್ಕಾರ ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ.
ಹೌದು, ಬೆಂಗಳೂರಲ್ಲಿ ಕೊರೊನಾ ಕೇಸ್ ಹೆಚ್ಚಳ ಆಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸೂಚನೆ ನೀಡಿದೆ. ವಿಕ್ಟೋರಿಯಾ ಆಸ್ಪತ್ರೆ , ರಾಜೀವ್ ಗಾಂಧಿ ಆಸ್ಪತ್ರೆ, ಬೆಂಗಳೂರಿನ ಆಸ್ಪತ್ರೆ ಸೇರಿ ನಗರದ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ.
ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ. ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಏಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ. ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲಿ ಎಂದು ನಾನು ಮನವಿ ಮಾಡುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ. ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಏಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ. ಆರೋಗ್ಯ ಇಲಾಖೆ… pic.twitter.com/2Xr73YfsBA
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 26, 2025