ಬೆಂಗಳೂರು : ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜ್ ಕುಮಾರ್ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಳಿ ಈ ಘಟನೆ ನಡೆದಿದೆ.
ಮೃತರನ್ನು ಹನುಮಂತರಾಯಪ್ಪ (71) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದಾಗ ರಾಜಾಜಿನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಪರಿಣಾಮ ಹಿಂದೆಯಿಂದ ಬರುತ್ತಿದ್ದ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಹನುಮಂತರಾಯಪ್ಪ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

