HomeLatest NewsBREAKING : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು.!

BREAKING : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್ (29) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಅಕ್ಷಯ್ ಮೃತಪಟ್ಟಿದ್ದಾನೆ.

ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇರುವುದರಿಂದ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದರು. ಆದರೆ ಇದೀಗ ಯುವಕ ಅಕ್ಷಯ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದಿದ್ದು, ಬೈಕ್ ಸವಾರ ಅಕ್ಷಯ್ (29) ಗಂಭೀರವಾಗಿ ಗಾಯಗೊಂಡಿದ್ದನು.ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಭಾನುವಾರ ತಂದೆ ಹುಟ್ಟುಹಬ್ಬದ ಹಿನ್ನೆಲೆ ಮಟನ್ ತೆಗೆದುಕೊಂಡು ಬರುವುದಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗಳಾಗಿದ್ದ ಅಕ್ಷಯ್ ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ತಲೆಚಿಪ್ಪು 17 ಚೂರುಗಳಾಗಿದೆ ಎಂದು ವೈದ್ಯರು ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮರದ ಕೊಂಬೆ ಬಿದ್ದ ಹೊಡೆತಕ್ಕೆ ಬೈಕ್ ಸವಾರ ಬೈಕ್ ನಿಂದ ಕೆಳಗೆ ಬಿದ್ದಿದ್ದರು. ರಕ್ತದ ಮಡುವಲ್ಲಿ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular