ಬೆಂಗಳೂರು : ಯುವಕನನ್ನು ಕಿಡ್ನ್ಯಾಪ್ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಸೂತ್ರಧಾರಿ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿ ರಿಮ್ಯಾಂಡ್ ಹೋಮ್ ಗೆ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 8 ಮಂದಿಯನ್ನು ಜಾಮೀನನ ಮೇಲೆ ಬಿಡುಗಡೆ ಮಾಡಲಾಗಿದ್ದು, 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕನನ್ನು ಕಿಡ್ನ್ಯಾಪ್ ಮಾಡಿದ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿ ವಿಕೃತವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕುಶಾಲ್ ಎಂಬ ಯುವಕನನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಲಾಗಿದೆ.ಯುವತಿ ಎದುರೇ ಈ ಘಟನೆ ನಡೆದಿದೆ.
ಘಟನೆ ಹಿನ್ನೆಲೆ
ಕಾಲೇಜಿಗೆ ಹೋಗುತ್ತಿದ್ದಾಗ ಕುಶಾಲ್ ಹಾಗೂ ಯುವಕನ ನಡುವೆ ಪ್ರೀತಿ ಚಿಗುರಿತ್ತು. ಸುಮಾರು 2 ವರ್ಷ ಪ್ರೀತಿ ಯುವತಿ ನಂತರ ಯುವಕನಿಗೆ ಗುಡ್ ಬೈ ಹೇಳಿದ್ದಳು. ನಂತರ ಬೇರೆ ಯುವಕನಿಗೆ ಕಾಳು ಹಾಕಿದ್ದಾಳೆ. ಇದರಿಂದ ರೊಚ್ಚಿಗೆದ್ದ ಕುಶಾಲ್ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ. ಇದನ್ನು ಯುವತಿ ತನ್ನ ಸ್ನೇಹಿತನಿಗೆ ತಿಳಿಸಿದ್ದಾಳೆ. ನಂತರ ಯುವತಿ ತನ್ನ ಗೆಳೆಯ ಹಾಗೂ ಸ್ನೇಹಿತರ ಜೊತೆ ಆತನನ್ನು ಕಾರಿನಲ್ಲಿ ಅಪಹರಿಸಿಕೊಂಡು ಬರುತ್ತಾರೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮಾರಣಾಂತಿಕವಾಗಿ ಹಲ್ಲೆ ನಡೆಸುತ್ತಾರೆ.