BREAKING: ಬೆಂಗಳೂರಿಗೆ ಆಗಮಿಸಿದ ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್; ಭರ್ಜರಿ ಸ್ವಾಗತ ಕೋರಿದ ಕಾರ್ಯಕರ್ತರು, ಶಾಸಕರು

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ನೂತನ ಕಾಂಗ್ರೆಸ್ ಶಾಸಕರು ಆತ್ಮೀಯವಾಗಿ ಸ್ವಾಗತ ಕೋರಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಜೊತೆಯಾಗಿ ಆಗಮಿಸಿರುವ ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ, ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಭರ್ಜರಿಯಾಗಿ ಸ್ವಾಗತಿಸಿದರು. ಕಾಂಗ್ರೆಸ್ ನ ನೂತನ ಶಾಸಕರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಹೆಚ್ ಎ ಎಲ್ ಬಳಿ ರಸ್ತೆಯುದ್ದಕ್ಕೂ ಗೊಂಬೆ ಕುಣಿತ, ಕಂಸಾಳೆ, ಡೊಳ್ಳು ಕುಣಿತ ಮೊದಲಾದ ಕಲಾತಂಡಗಳು ನೃತ್ಯ ಪ್ರದರ್ಶನದ ಮೂಲಕ ನಾಯಕರನ್ನು ಬರಮಾಡಿಕೊಂಡರೆ ಇನ್ನೊಂದೆಡೆ ಇಬ್ಬರು ನಾಯಕರ ಕಾರಿನ ಮೇಲೆ ಹೂಮಳೆಗರೆದು ಅಭಿಮಾನಿಗಳು, ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು. ಇಬ್ಬರು ನಾಯಕರು ನೆರೆದ ಜನರತ್ತ ಕೈಬೀಸಿ ಸಾಗಿದರು. ಏರ್ ಪೋರ್ಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ, ಹರ್ಷೋದ್ಗಾರ ಮುಗಿಲುಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read