ಬೆಂಗಳೂರು : ಬೆಂಗಳೂರಿನ ಚಿನ್ನಯ್ಯಪಾಳ್ಯದಲ್ಲಿ ನಡೆದ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ”ಅವಘಡದಲ್ಲಿ ಮೃತಪಟ್ಟ ಬಾಲಕ ಮುಬಾರಕ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ” ಎಂದು ಘೋಷಿಸಿದ್ದಾರೆ. ಹಾಗೂ ”ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ” ಎಂದು ಹೇಳಿದ್ದಾರೆ.
”ಮೇಲ್ನೋಟಕ್ಕೆ ಇದು ಗ್ಯಾಸ್ ಸಿಲಿಂಡರ್ ಸ್ಪೋಟ ಎಂದು ಕಂಡು ಬರುತ್ತದೆ. ಕಸ್ತೂರಮ್ಮ ಎಂಬುವವರ ಮನೆಯಲ್ಲಿ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಮುಬಾರಕ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ 9 ಜನ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಹಾನಿಯಾದ ಮನೆಗಳನ್ನು ಕೂಡ ನಾವೇ ದುರಸ್ತಿ ಮಾಡಿಕೊಡಲಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಘಟನೆ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು. ಓರ್ವ ಬಾಲಕ ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಒಂದು ಸಿಲಿಂಡರ್ ಸ್ಪೋಟಕ್ಕೆ 10 ಮನೆಗಳು ಛಿದ್ರ ಛಿದ್ರವಾಗಿದೆ ಎನ್ನಲಾಗಿದೆ .ಸಿಲಿಂಡರ್ ಸ್ಪೋಟಕ್ಕೆ ಓರ್ವ ಮಹಿಳೆಯ ಕಾಲು ಕೂಡ ಕಟ್ ಆಗಿದೆ.