ಬೆಂಗಳೂರು : ಹಿಟ್ & ರನ್ ಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಸಮೀಪ ನಡೆದಿದೆ.
ದೇವನಹಳ್ಳಿಯಿಂದ ದೊಡ್ಡಬಳ್ಳಾಪುರ ಕಡೆ ಬರುತ್ತಿದ್ದ ಬುಲೆಟ್ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಾಗೂ ಅಪಘಾತದಲ್ಲಿ ಪಾದಚಾರಿಯೊಬ್ಬರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಘಟನೆ ಬಳಿಕ ಸ್ಥಳದಿಂದ ಚಾಲಕ ಪರಾರಿಯಾಗಿದ್ದಾನೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

