ಬೆಂಗಳೂರು : ಇಂದು ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬವಿರುವ ಹಿನ್ನೆಲೆ ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಇದೀಗ ಬ್ರೇಕ್ ಬಿದ್ದಿದೆ. ಆದರೆ ಅಭಿಮಾನ್ ಸ್ಟುಡಿಯೋ ಪಕ್ಕದ 2 ಎಕರೆ ಜಾಗದಲ್ಲಿ ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆ ಮಾಡಲು ನಿರ್ಧರಿಸಲಾಗಿದೆ.
ಅಭಿಮಾನ್ ಸ್ಟುಡಿಯೋ ಪಕ್ಕದಲ್ಲಿಯೇ ಇರೋ ಎರಡು ಎಕರೆ ಜಾಗದಲ್ಲಿಯೇ ಎಲ್ಲ ವ್ಯವಸ್ಥೆ ಮಾಡಲಾಗಿದೆ. ವಿಷ್ಣುಪುಣ್ಯ ಭೂಮಿಯಲ್ಲಿದ್ದ ರೀತಿಯ ಒಂದು ಮಂಟಪ ಇಲ್ಲಿ ಮಾಡಲಾಗಿದೆ.
ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಕೋರ್ಟ್ ಅನುಮತಿ ನೀಡದ ಹಿನ್ನೆಲೆ ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಅಭಿಮಾನ್ ಸ್ಟುಡಿಯೋದಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.ಸ್ಥಳದಲ್ಲಿ 20 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಅಭಿಮಾನ್ ಸ್ಟುಡಿಯೋದಲ್ಲಿ ಇರುವ ವಿಷ್ಣುವರ್ಧನ್ ಸ್ಮಾರಕ ಜಾಗದಲ್ಲಿ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಕಾಯುತ್ತಿದ್ದರು. ಇದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ ಗೆ ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ರಿಟ್ ಅರ್ಜಿ ಸಲ್ಲಿಸಿತ್ತು. ಆದರೆ ವಿಚಾರಣೆಯನ್ನು ನ.4 ಕ್ಕೆ ಮುಂದೂಡಲಾಗಿದೆ.
ಇತ್ತೀಚೆಗಷ್ಟೇ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅವರ ಅಳಿಯ ನಟ ಅನಿರುದ್ದ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ಅಭಿಮಾನ್’ ಸ್ಡುಡಿಯೋದಲ್ಲಿ 10 ಗುಂಟೆ ಮೀಸಲಿಡುವಂತೆ ಮನವಿ ಮಾಡಿದ್ದರು.ಬೆಂಗಳೂರು ನಗರದ ಕೆಂಗೇರಿ ರಿಂಗ್ ರೋಡ್ ನಲ್ಲಿರುವ ಸಾಹಸ ಸಿಂಹ, ನಟ ಡಾ. ವಿಷ್ಣುವರ್ಧನ್ ಸಮಾಧಿ ನೆಲಸಮಗೊಳಿಸಲಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿಗಿತ್ತು. ಅದೇ ಜಾಗದಲ್ಲಿ ನಟ ವಿಷ್ಣುವರ್ಧನ್ ಸಮಾಧಿಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿತ್ತು.ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾದ ಹಿನ್ನೆಲೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿ ತೆರವುಗೊಳಿಸಲಾಗಿತ್ತು. ಮೈಸೂರಿನಲ್ಲಿ ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾಗಿದೆ.