ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ ನಲ್ಲಿ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ರನ್ನು ಅಮಾನತು ಮಾಡಿತ್ತು. ಇದೀಗ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ ರದ್ದುಪಡಿಸಿದೆ. ಹಾಗೂ ಹಿಂದಿನ ಎಲ್ಲಾ ಭತ್ಯೆ ಹಾಗೂ ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ.
ಕಾಲ್ತುಳಿತ ದುರಂತದಲ್ಲಿ ತಮ್ಮನ್ನು ಅಮಾನತು ಮಾಡಿದ ಸರ್ಕಾರದ ಆದೇಶ ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ (CAT)ಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅರ್ಜಿ ಸಲ್ಲಿಸಿದ್ದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸೇರಿದಂತೆ ಹಲವರನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.ನಂತರ ವಿಕಾಸ್ ಕುಮಾರ್ ಅವರು ತಮ್ಮ ಅಮಾನತು ಆದೇಶ ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧೀಕರಣಕ್ಕೆ ಅರ್ಜಿ ಸಲ್ಲಿಸಿದ್ದರು.. ಇದೀಗ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ ರದ್ದುಪಡಿಸಿದೆ. ಹಾಗೂ ಹಿಂದಿನ ಎಲ್ಲಾ ಭತ್ಯೆ ಹಾಗೂ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿದೆ.