BREAKING: ಬೆಳಿಗ್ಗೆಯಷ್ಟೇ ನಾಳೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಎಂದಿದ್ದ ಸಚಿವೆ; ಮಧ್ಯಾಹ್ನ ಇನ್ನೂ 4-5 ದಿನ ಮುಂದೂಡಿಕೆ ಎಂದು ಸ್ಪಷ್ಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಮುಂದೂಡಿಕೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಬೆಳಿಗ್ಗೆಯಷ್ಟೇ ನಾಳೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿತ್ತು. ಆದರೆ 4-5 ದಿನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಸ್ಪಷ್ಟ ಪಡಿಸಿದರು.

ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಹೊಸ ಆಪ್ ಸಿದ್ಧಪಡಿಸಲು ಇ-ಗವರ್ನನ್ಸ್ ಗೆ ಕೇಳಿಕೊಂಡಿದ್ದೆವು. ಹೊಸ ಆಪ್ ಸಿದ್ಧಪಡಿಸಲು 4-5 ದಿನ ಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಸ್ವಯಂಸೇವಾ ಸಂಸ್ಥೆಗಳಿಗೂ ಆಹ್ವಾನ ನೀಡಿದ್ದೆವು. ಅವರು ಕೂಡ 4-5 ದಿನ ಸಮಯ ನೀಡುವಂತೆ ತಿಳಿಸಿದ್ದಾರೆ. ಹಾಗಾಗಿ ಸಂಪುಟ ಸದಸ್ಯರ ಸಲಹೆ ಮೇರೆಗೆ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ 4-5 ಮುಂದೂಡಲಾಗುತ್ತಿದೆ ಎಂದರು.

ಸೇವಾಸಿಂಧು ಆಪ್, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಡಕಚೇರಿಗಳಿಗೂ ತೆರಳಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read