HomeKarnatakaBREAKING: ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು; 10 ಜನರಿಗೆ ಗಂಭೀರ ಗಾಯ

BREAKING: ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು; 10 ಜನರಿಗೆ ಗಂಭೀರ ಗಾಯ

ಶಿವಮೊಗ್ಗ: ಬೊಲೆರೋ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಬಳಿ ನಡೆದಿದೆ.

ಆಟೋದಲ್ಲಿ ತೆರಳುತ್ತಿದ್ದ ಇಬ್ಬರೂ ಮೃತಪಟ್ಟಿದ್ದು, ರಾಮ್ ಜಿ ನಾಯ್ಕ್ (70) ಹೇಮಿಬಾಯಿ (61) ಮೃತರು. ತೊಟ್ಟಿಲು ಶಾಸ್ತ್ರಕ್ಕೆ ತೆರಳುತ್ತಿದ್ದ ಆಟೋಗೆ ಬೊಲೆರೋ ವಾಹನ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರು ಶಿಕಾರಿಪುರ ತಾಲೂಕಿನ ಬಿದರಕೊಪ್ಪ ತಾಂಡಾ ನಿವಾಸಿಗಳು. ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular