HomeKarnatakaBREAKING: ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ

BREAKING: ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಹಾಗೂ ತೂಫಾನ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಮಗು, ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೂಫಾನ್ ವಾಹನದಲ್ಲಿದ್ದ ಕೆಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೇಲೂರಿನಿಂದ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಮೃತರ ಬಗ್ಗೆ ಕಡಬ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular