HomeKarnatakaBREAKING: ಭೀಕರ ಸರಣಿ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING: ಭೀಕರ ಸರಣಿ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: 2 ಲಾರಿ ಹಾಗೂ ಒಂದು ಕಾರಿನ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ತಾಲೂಕಿನಲ್ಲಿ ನಡೆದಿದೆ.

ಕಾರಿನ ಮುಂದೆ ತೆರಳುತ್ತಿದ್ದ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬಂದ ಆಲ್ಟೋ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಕಾರಿಗೆ ಹಿಂದಿನಿಂದ ಬಂದ ಲಾರಿ ಕೂಡ ಗುದ್ದಿದ್ದು ಭೀಕರ ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಶಿವಪುರದ ಮುಪ್ಪಿನ ಕಾಡಸಿದ್ದೇಶ್ವರ ಶ್ರೀ ಸೇರಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular