BREAKING : ಮಂಗಳೂರಿನಲ್ಲಿ ಮಹಾಮಳೆ ಆರ್ಭಟ  :  ಗುಡ್ಡ ಕುಸಿದು ಒಂದೇ ದಿನ ಇಬ್ಬರು ಬಲಿ.!

ಮಂಗಳೂರು : ಮಂಗಳೂರಿನಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ.

ಮನೆ ಮೇಲೆ ಗುಡ್ಡ ಕುಸಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ಈ ಘಟನೆ ನಡೆದಿದೆ.ಮೊಂಟೆಪದವು ಬಳಿ ಗುಡ್ಡ ಕುಸಿದು ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಾಲ್ವರನ್ನು ರಕ್ಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾರಿ ಮಳೆಗೆ ಕಾಂಪೌಂಡ್ ಕುಸಿದು ಬಾಲಕಿ ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕೆರೆ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ನಯಿಮ (10) ಎಂದು ಗುರುತಿಸಲಾಗಿದೆ.ಮನೆಗೆ ಹಿಂಬದಿಯ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿ ಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡು ನಯಿಮ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read