ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಬಂಧಿತರಾಗಿದ್ದ ‘ಬಿಗ್ ಬಾಸ್’ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ಅವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.
ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ರೀಲ್ಸ್ ಮಾಡಲು ವಿನಯ್ ಮತ್ತು ರಜತ್ ಮಚ್ಚು ಪ್ರದರ್ಶಿಸಿದ್ದರು. ಆರೋಪಿಗಳು ಬಳಸಿದ್ದು ಫೈಬರ್ ಲಾಂಗ್ ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರಿಗೂ ನೋಟಿಸ್ ನೀಡಿ ಇಂದು ಬೆಳಿಗ್ಗೆ 10.30 ಕ್ಕೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಬಿಟ್ಟು ಕಳಿಸಲಾಗಿದೆ.
ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾಗಿದ್ದ ವಿನಯ್ ಹಾಗೂ ರಜತ್ ಕಿಇಶನ್, ಡಿ ಬಾಸ್ ಬಟ್ಟೆ ಧರಿಸಿ ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲ್ಲಿ ರೀಲ್ಸ್ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಠಾಣೆಯಲ್ಲಿ ವಿನಯ್ ಹಾಗೂ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.