BREAKING: ಮತಗಟ್ಟೆಯಲ್ಲೇ ಯುವಕರ ಗುಂಪಿನಿಂದ ಮಾರಾಮಾರಿ; ಮಹಿಳೆಯರ ಮೇಲೂ ಹಲ್ಲೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ವೇಳೆ ಮಧ್ಯಾಹ್ನವಾಗುತ್ತಿದ್ದಂತೆ ಹಲವೆಡೆ ಗಲಾಟೆ, ಮಾರಾಮಾರಿ ಘಟನೆಗಳು ನಡೆದಿವೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಲ್ಲಿ ಮತಕೇಂದ್ರದಲ್ಲೇ ಯುವಕರ ಗ್ಯಾಂಗ್ ಹಲ್ಲೆ ನಡೆಸಿದೆ.

ಗಾಂಜಾ ನಶೆಯಲ್ಲಿ ಮತಗಟ್ಟೆಗೆ ಬಂದ ಯುವಕರ ಗುಂಪು ಏಕಾಏಕಿ ದೊಣ್ಣೆಗಳಿಂದ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳೆಯರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪದ್ಮನಾಭ ನಗರದ ಪಾಪಯ್ಯ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ. ಮಾಜಿ ಕಾರ್ಪೊರೇಟರ್ ಕಬ್ಬಾಳ್ ಉಮೇಶ್ ಹುಡುಗರನ್ನು ಕರೆಸಿ ಗಲಾಟೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read