HomeKarnatakaBREAKING: ಮತ್ತೋರ್ವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

BREAKING: ಮತ್ತೋರ್ವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಗಳ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದೆ. ಕಾರ್ಕಳ ಟೌನ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಮನೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಕೊರಳೊಡ್ಡಿದ್ದಾರೆ. ಪ್ರಶಾಂತ್ (48) ಆತ್ಮಹತ್ಯೆ ಮಾಡಿಕೊಂಡವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಪಿ, ಶುಗರ್ ನಿಂದ ಬಳಲುತ್ತಿದ್ದ ಪ್ರಶಾಂತ್ ಕಳೆದ 2 ತಿಂಗಳಿಂದ ಅನಾರೋಗ್ಯ ಕಾರಣಕ್ಕಾಗಿ ರಜೆ ಪಡೆದು ಮನೆಯಲ್ಲಿಯೇ ಇದ್ದರು. ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾರ್ಕಳ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular