ಅಹಮದಾಬಾದ್: ಮದುವೆ ಮನೆಯಲ್ಲಿ ಊಟ ಸೇವಿಸಿದ 400ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಗುಜರಾತ್ ನ ದಾಹೋದ್ ಜಿಲ್ಲೆಯ ಅಬ್ಲೋಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 400ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿದ್ದು, ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ ಬಳಿಕ ಜನರು ವಾಂತಿ, ಭೇದಿ, ಹೊಟ್ಟೆ ನೋವು, ತಲೆ ಸುತ್ತುವಿಕೆಯಿಂದ ಬಳಲಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಡೆಸಿದ್ದಾರೆ.

