HomeKarnatakaBREAKING: ಮದ್ಯಪಾನ ಮಾಡಿ ಸಾರ್ವಜನಿಕರ ಜೊತೆ ಪೊಲೀಸರ ಕಿರಿಕ್; ಇಬ್ಬರು ASI, ಹೆಡ್ ಕಾನ್ಸ್ ಟೇಬಲ್...

BREAKING: ಮದ್ಯಪಾನ ಮಾಡಿ ಸಾರ್ವಜನಿಕರ ಜೊತೆ ಪೊಲೀಸರ ಕಿರಿಕ್; ಇಬ್ಬರು ASI, ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ರಾಮನಗರ: ಕರ್ತವ್ಯ ನಿರತ ಪೊಲಿಸರು ಕಂಠಪೂರ್ತಿ ಮದ್ಯಪಾನ ಮಾಡಿ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿರುವುದೂ ಅಲ್ಲದೇ, ನಿಂದಿಸಿದ ಘಟನೆ ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದಿದೆ.

ಮದ್ಯಪಾನ ಮಾಡಿ ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ಎ ಎಸ್ ಐ ಹಾಗೂ ಓರ್ವ ಹೆಡ್ ಕಾನ್ಸ್ ಟೇಬಲ್ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಮನಗರ ಎಸ್ ಪಿ ಕಾರ್ತಿಕ್ ಇಬ್ಬರು ಎಎಸ್ಐ ಹಾಗೂ ಹೆಡ್ ಕಾನ್ಸ್ ಟೇಬಲ್ ಸೇರಿ ಮೂವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೆನ್ನಪಟ್ಟಣ ಠಾಣೆಯ ಸಿ ನಾರಾಯಣಮೂರ್ತಿ, ಮಾಗಡಿ ಪೊಲೀಸ್ ಠಾಣೆಯ ಎ ಎಸ್ ಐ ಮಂಜುನಾಥ್ ಸೇರಿ ಮೂವರು ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular