HomeLatest NewsBREAKING : ಮನೆ ಮನೆಗೆ ತೆರಳಿ ಒಳಮೀಸಲಾತಿ ಗಣತಿ , ಸರ್ವೆ ಕಾರ್ಯಕ್ಕೆ 65,000 ಶಿಕ್ಷಕರ...

BREAKING : ಮನೆ ಮನೆಗೆ ತೆರಳಿ ಒಳಮೀಸಲಾತಿ ಗಣತಿ , ಸರ್ವೆ ಕಾರ್ಯಕ್ಕೆ 65,000 ಶಿಕ್ಷಕರ ನೇಮಕ : CM ಸಿದ್ದರಾಮಯ್ಯ

ಬೆಂಗಳೂರು : ಒಳಮೀಸಲಾತಿ ಸಮೀಕ್ಷೆ ನಡೆಸಲು 65 ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ , ಮೊದಲು ಮನೆ ಮನೆಗೆ ತೆರಳಿ ಅಂಕಿ ಅಂಶಗಳನ್ನು ಕಲೆ ಹಾಕಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಿಕ್ಷಕರು ಮೊದಲ ಹಂತದಲ್ಲಿ ಮನೆ ಮನೆಗೆ ತೆರಳಿ ಅಂಕಿ ಅಂಶಗಳನ್ನು ಸಂಗ್ರಹಿಸುತ್ತಾರೆ. ಇಂದಿನಿಂದ ಮೇ 17 ರವರೆಗೆ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಒಟ್ಟು 3 ಹಂತಗಳಲ್ಲಿ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಇಂದಿನಿಂದ ಮೇ 17 ರವರೆಗೆ SC ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಒಳಮೀಸಲಾತಿ ಬಗ್ಗೆ ನಿಖರವಾದ ವರದಿ ನೀಡಲು ಸಮೀಕ್ಷೆ ನಡೆಸಲಾಗುತ್ತಿದೆ. ಇಂದಿನಿಂದ ಮೇ 17 ರವರೆಗೆ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ 101 ಜಾತಿಗಳು ಇದೆ ಎಂದು ಹೇಳಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಒಳ ಮೀಸಲಾತಿ ಕೊಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://www.facebook.com/KarnatakaVarthe.Official/videos/1439150367248814

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular