HomeKarnatakaBREAKING: ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡುವ ಮೂಲಕ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದ ಸಿಎಂ

BREAKING: ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡುವ ಮೂಲಕ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದ ಸಿಎಂ

ಬೆಂಗಳೂರು: ವಿಧಾನಸೌಧದಿಂದ ಬಿಎಂಟಿಸಿ ಬಸ್ ನಲ್ಲಿ ಮೆಜೆಸ್ಟಿಕ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಮತ್ತೊಮ್ಮೆ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮೆಜೆಸ್ಟಿಕ್ ನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡಿದರು. ಇದೇ ವೇಳೆ ಇನ್ನೂ ಹಲವು ಕೆ ಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಉಚಿತ ಟಿಕೆಟ್ ವಿತರಿಸಿದರು.

ಇದೇ ವೇಳೆ ಮಹಿಳೆಯರಿಗೆ ಹೂವು ಹಾಗೂ ಸಿಹಿ ತಿನಿಸನ್ನು ಹಂಚಲಾಯಿತು. ಮೆಜೆಸ್ಟಿಕ್ ನಲ್ಲಿ ಉಚಿತ ಬಸ್ ಪ್ರಯಾಣದ ಟಿಕೆಟ್ ಪಡೆದ ಮಹಿಳೆಯರು ಖುಷಿಯಿಂದ ಕುಣಿದು ಸಂಭ್ರಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular