BREAKING : ಶಾಸಕ ನಂಜೇಗೌಡಗೆ ಬಿಗ್ ರಿಲೀಫ್ : ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ಸೂಚನೆ.!


ಬೆಂಗಳೂರು : ಶಾಸಕ ನಂಜೇಗೌಡಗೆ ಬಿಗ್ ರಿಲೀಫ್ ಎಂಬಂತೆ
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

ಮಾಲೂರು ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು ಎಂದು ಆದೇಶ ಹೊರಡಿಸಿದ ಹೈಕೋರ್ಟ್ ಬಳಿಕ ತನ್ನದೇ ತೀರ್ಪಿಗೆ ತಡೆ ನೀಡಿ ‘ಸುಪ್ರೀಂಕೋರ್ಟ್’ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.ಮಾಲೂರು ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು, ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿತ್ತು. ಬಳಿಕ ತನ್ನದೇ ತೀರ್ಪಿಗೆ ತಡೆ ನೀಡಿದ ಹೈಕೋರ್ಟ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.

2023 ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ ನಂಜೇಗೌಡ ಆಯ್ಕೆ ಆಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ ಎಸ್ ಮಂಜುನಾಥ್ ಗೌಡ ಅರ್ಜಿ ಸಲ್ಲಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read