BREAKING: ಮ್ಯಾಜಿಕ್ ನಂಬರ್ ದಾಟುತ್ತಿದ್ದಂತೆ ಕೈ ಪಾಳೆಯದಲ್ಲಿ ಗರಿಗೆದರಿದ ರಾಜಕೀಯ; ಕಾಂಗ್ರೆಸ್ ನ ಗೆದ್ದ ಎಲ್ಲಾ ಶಾಸಕರನ್ನು ಹೊರ ರಾಜ್ಯಕ್ಕೆ ಶಿಫ್ಟ್ ಮಾಡಲು ಸಿದ್ಧತೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತಗಳತ್ತ ದಾಪುಗಾಲಿಟ್ಟಿದ್ದು, 113 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಹಿನ್ನೆಲೆಯಲ್ಲಿ ಕೈ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ನಾಯಕರು ತಂತ್ರ ರೂಪಿಸಿದ್ದು, ಇಂದು ರಾತ್ರಿಯೇ ಎಲ್ಲಾ ಶಾಸಕರನ್ನು ಬೆಂಗಳೂರಿಗೆ ಕರೆ ತರುವಂತೆ ಪದಾಧಿಕಾರಿಗಳಿಗೆ ಸೂಚಿಸಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಾತ್ರಿ ಸಭೆ ನಡೆಯಲಿದ್ದು, ಸಭೆ ಬಳಿಕ ಬೆಂಗಳೂರಿನಿಂದ ಹೊರ ರಾಜ್ಯಕ್ಕೆ ಎಲ್ಲಾ ಶಾಸಕರನ್ನು ಶಿಫ್ಟ್ ಮಾಡಲು ಪ್ಲಾನ್ ಮಾಡಲಾಗಿದೆ.

ಹೈದರಾಬಾದ್‌ ಹೊರ ವಲಯದ ಐಶಾರಾಮಿ ರೆಸಾರ್ಟ್‌ ಬುಕ್‌ ಮಾಡಲಾಗಿದೆ ಎನ್ನಲಾಗಿದ್ದು,ಇದರ ಜೊತೆಗೆ ರಾಜಸ್ಥಾನದ ಉದಯಪುರದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಶಾಸಕರನ್ನು ಇಡುವ ಬಗ್ಗೆ ಯೋಜನೆ ರೂಪಿಸಲಾಗಿದೆ. ಸುತ್ತಲು ನೀರಿನಿಂದ ಆವೃತವಾಗಿರುವ ಹೋಟೆಲ್ ನಲ್ಲಿ ಶಾಸಕರಿಗಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read