ಬೆಂಗಳೂರು : ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ಕೋರ್ಟ್ ಸೂಚನೆಗೆ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ಪರಪ್ಪನ ಅಗ್ರಹಾರಕ್ಕೆ ತೆರಳಲಿದ್ದಾರೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ. ಈ ಹಿನ್ನಲೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದರು. ಅವರು ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.