HomeKarnatakaBREAKING: ರಾಜಕಾರಣದಲ್ಲಿ ನೆಮ್ಮದಿಯೆ ಇಲ್ಲದಾಗಿದೆ; ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿದ ಸಂಸದ ಡಿ.ಕೆ. ಸುರೇಶ್

BREAKING: ರಾಜಕಾರಣದಲ್ಲಿ ನೆಮ್ಮದಿಯೆ ಇಲ್ಲದಾಗಿದೆ; ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿದ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತೆ ರಾಜಕೀಯ ನಿವೃತ್ತಿಯ ಬಗ್ಗೆ ಪುನರುಚ್ಛಾರ ಮಾಡಿದ್ದಾರೆ. ರಾಜಕಾರಣದಲ್ಲಿ ನೆಮ್ಮದಿ ಅನ್ನುವುದೇ ಇಲ್ಲದಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ನನಗೆ ರಾಜಕಾರಣ ಬೇಡವೆನಿಸಿದೆ. ಹೀಗಾಗಿ ಚುನಾವಣಾ ರಾಜಕೀಯದಿಂದ ದೂರ ಉಳಿಯುವೆ. ರಾಜಕೀಯದಲ್ಲಿ ನೆಮ್ಮದಿ ಅನ್ನೋದೆ ಇಲ್ಲದಾಗಿದೆ. ಹೊರಗೆ ಹೋದರೆ ಜನರ ಬಳಿಯೂ ನೆಮ್ಮದಿ ಇಲ್ಲ, ಇಲ್ಲಿ ಜೊತೆ ಇರುವವರ ಬಳಿಯೂ ನೆಮ್ಮದಿ ಇಲ್ಲ. ವಿಶ್ರಾಂತಿ ಬೇಕಾಗಿದೆ… ಆದ್ದರಿಂದ ದೂರ ಉಳಿಯುವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆಯೂ ರಾಜಕೀಯದಿಂದ ದೂರ ಉಳಿಯುವ ಮಾತುಗಳನ್ನಾಡಿದ್ದ ಡಿ.ಕೆ. ಸುರೇಶ್, ಈಗ ಮತ್ತೊಮ್ಮೆ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದು, ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲವೇ? ಎಂಬ ಪ್ರಶ್ನೆ ಮೂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular