ಮಡಿಕೇರಿ: ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ನಡೆದಿದೆ.
ಗೌರಿ(60) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮನೆ ಹಿಂಬಾಗ ಪಾತ್ರ ತೊಳೆಯುತ್ತಿದ್ದ ಸಂದರ್ಭದಲ್ಲಿ ಮರ ಬಿದ್ದಿದ್ದರಿಂದ ಗಾಯಗೊಂಡಿದ್ದ ಗೌರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.