ವಿಜಯಪುರ : ವಾಮಾಚಾರ ಮಾಡಿ ಕೆನರಾ ಬ್ಯಾಂಕ್ ನಲ್ಲಿ ಹಣ, ಚಿನ್ನಾಭರಣ ದರೋಡೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿರುವ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದೆ.
ಬ್ಯಾಂಕ್ ನ ಬಾಗಿಲು ಹಾಗೂ ಕಿಟಕಿ ಒಡೆದು ಕಳ್ಳರು ಹಣ , ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ.
ಬ್ಯಾಂಕ್ ನಲ್ಲಿ ಕಸಗುಡಿಸಲು ಕ್ಲೀನರ್ ಬಂದಾಗ ಗೊಂಬೆ, ನಿಂಬೆ ಹಣ್ಣು ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎಷ್ಟು ಹಣ, ಚಿನ್ನಾಭರಣ ಕಳ್ಳತನವಾಗಿದೆ ಎಂಬುದು ಇನ್ನೂ ಬಹಿರಂಗವಾಗಿಲ್ಲ.
ಬ್ಯಾಂಕ್ ನಲ್ಲಿ ಕಳ್ಳರು ಸಿಸಿ ಕ್ಯಾಮೆರಾಗಳ ಹಾರ್ಡ್ ಡ್ರೈವ್ ಕೂಡ ತೆಗೆದುಕೊಂಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
You Might Also Like
TAGGED:ಬ್ಯಾಂಕ್ ದರೋಡೆ :