HomeLatest NewsBREAKING : ರಾಜ್ಯದ ಎಲ್ಲಾ ಶಾಲೆಗಳು ತುರ್ತಾಗಿ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ.!

BREAKING : ರಾಜ್ಯದ ಎಲ್ಲಾ ಶಾಲೆಗಳು ತುರ್ತಾಗಿ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ತುರ್ತಾಗಿ ಈ ಮಾಹಿತಿ ಸಲ್ಲಿಸುವಂತೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸಭಾ ಸೂಚನಾ ಪತ್ರದಂತೆ 2025-26ನೇ ಸಾಲಿನ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯನ್ನು ದಿನಾಂಕ:25-08-2025 ರಂದು ಹಮಿಕೊಳ್ಳಲಾಗಿದ್ದು,

ಸದರಿ ಸಭೆಗೆ ಸಂಬಂಧಿಸಿದಂತೆ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಂದ ಅಟ್ರಾಸಿಟಿ ಪ್ರಕರಣಗಳು ದಾಖಲಾಗಿದ್ದಲ್ಲಿ ವಿವರವನ್ನು ಸಭೆಗೆ ಮಾಹಿತಿಯನ್ನು ಒದಗಿಸಬೇಕಾಗಿರುವುದರಿಂದ ಸದರಿ ಮಾಹಿತಿಯನ್ನು ಈ ಕೆಳಗಿನ ನಮೂನೆಯಲ್ಲಿ ತಪ್ಪದೇ ಈ ಮೇಲ್ ವಿಳಾಸ [email protected] ಕಳುಹಿಸಲು ತಿಳಿಸಿದೆ. ಒಂದು ವೇಳೆ ಜಿಲ್ಲೆಯಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ಸಂಬಂಧಿಸಿದ ಯಾವುದೇ ಪ್ರಕರಣಗಳು ಇರದೇ ಇದ್ದಲ್ಲಿ ಶೂನ್ಯ ವರದಿಯನ್ನು ಸಲ್ಲಿಸುವುದು ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular