ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ (PIL) ಸಲ್ಲಿಕೆ ಮಾಡಿದ್ದಾರೆ.
ಮುಷ್ಕರ ನಡೆಸುವುದರಿಂದ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ಥಗೊಳ್ಳಲಿದೆ. ಇದರಿಂದ ನಾಗರಿಕರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತದೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಇಂದು ಮಧ್ಯಾಹ್ನ 2:30 ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗಸ್ಟ್ 5 ರಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯುವುದು ಅನುಮಾನವಾಗಿದೆ.
ನಾಳೆಯಿಂದ ಸಾರಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.