ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ಸರ್ಕಾರ ವಿಸ್ತರಿಸಿದೆ.
2027ರ ಅಕ್ಟೋಬರ್ 29 ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1993ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಎಂ.ಎ. ಸಲೀಂ 2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದರು. 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ಎಂ.ಎ. ಸಲೀಂ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ವರ್ಷದ ಜೂನ್ ನಲ್ಲಿ ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ ಒಂದು ವರ್ಷ ಸೇವಾವಧಿ ವಿಸ್ತರಿಸಿದೆ. 22. 9. 2006 ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ಡಿಜಿ ಐಜಿಪಿ ಎಂ.ಎ. ಸಲೀಂ ಅವರ ಸೇವಾವಧಿಯನ್ನು ಸರ್ಕಾರ ವಿಸ್ತರಿಸಿದೆ.

