ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ವರುಣ ಅಡ್ಡಿಯಾಗಿದ್ದು, ಹೊಸಪೇಟೆ ಸುತ್ತಾಮುತ್ತಾ ಭಾರಿ ಮಳೆಯಾಗುತ್ತಿದೆ.
ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸರ್ಕಾರದ ಸಚಿವರು, ಶಾಸಕರು ಮತ್ತಿತರರು ಹಾಜರಿರಲಿದ್ದಾರೆ.
ಕಾಂಗ್ರೆಸ್ ಕೂಡಲೇ ಸಮಾವೇಶವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಾದ ಮಳೆ ಹಾನಿ ಪ್ರದೇಶವನ್ನು ವೀಕ್ಷಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

