BREAKING : ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು.!

ರಾಯಚೂರು : ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಭೂತಲದಿನ್ನಿಯಲ್ಲಿ ನಡೆದಿದೆ.

ಟ್ಯಾಂಕರ್ ನಿಂದ ಪೂರೈಕೆಯಾದ ನೀರು ಕುಡಿದು ಗ್ರಾಮದ ಜನರು ಅಸ್ವಸ್ಥಗೊಂಡಿದ್ದಾರೆ. ಟ್ಯಾಂಕರ್ ಸ್ವಚ್ಚಗೊಳಿಸದೇ ನೀರು ಪೂರೈಕೆ ಮಾಡಿದ್ದಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ನೀರು ಕುಡಿದ ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಹಿನ್ನೆಲೆ ಭೂತಲದಿನ್ನಿ ಗ್ರಾಮದ ಜನರು ಗ್ರಾಮಪಂಚಾಯಿತಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read