ರೇಣುಕಸ್ವಾಮಿ ಅವರ ಸಂದೇಶಗಳಿಗೂ ಡಿಬಾಸ್ ಅಭಿಮಾನಿಗಳ ಸಂದೇಶಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಈ ರೀತಿಯ ಸ್ತ್ರೀದ್ವೇಷದ ಮನಸ್ಥಿತಿಯನ್ನು ಹೊಂದಿರುವ ಟ್ರೋಲ್ ಗಳಿಂದಾಗಿ ಮಹಿಳೆಯರು ಮತ್ತು ಯುವತಿಯರು ಕಿರುಕುಳ, ಅತ್ಯಾಚಾರ ಮತ್ತು ಕೊಲೆಗೆ ಒಳಗಾಗುತ್ತಾರೆ ಎಂದು ನಟಿ ರಮ್ಯಾ ಕಿಡಿಕಾರಿದ್ದಾರೆ.
ದರ್ಶನ್ ಅಭಿಮಾನಿಗಳ ಅಶ್ಲೀಲ ಸಂದೇಶಗಳನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ದರ್ಶನ್ ಫ್ಯಾನ್ಸ್ ಕಾಮೆಂಟ್ ಗೆ ರಮ್ಯಾ ಕೆಂಡಾಮಂಡಲರಾಗಿದ್ದಾರೆ.
ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ- ನನ್ನ ಇನ್ಸ್ಟಾಗ್ರಾಮ್ಗೆ ಸ್ವಾಗತ, ರೇಣುಕಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಾಮೆಂಟ್ಗಳೇ ಸಾಕ್ಷಿ ಎಂದು ತಿಳಿಸಿದ್ದ ರಮ್ಯಾ ನಂತರ ಬಂದ ಅಶ್ಲೀಲ ಸಂದೇಶಗಳನ್ನು ಕಳಿಸಿದವರ ಮಾಹಿತಿ ಸಹಿತ ಪೋಸ್ಟ್ ಮಾಡಿದ್ದಾರೆ.