ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಶಾಸಕ ಬೈರತಿ ಬಸವರಾಜ್ ಅವರಿಗೆ ಸೂಚಿಸಸಿದ್ದಾರೆ.
ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಹೆಣ್ಣೂರು ಬೈರತಿ ನಿವಾಸದಲ್ಲಿ ನೋಟಿಸ್ ನೀಡಲಾಗಿದೆ. ಪುಲಿಕೇಶಿ ನಗರ ಠಾಣೆ ಇನ್ಸ್ ಪೆಕ್ಟರ್ ಗೋವಿಂದರಾಜ್ ನೋಟಿಸ್ ನೀಡಿದ್ದಾರೆ. ಬೈರತಿ ಬಸವರಾಜ್ ಅವರ ಪುತ್ರ ನೀರಜ್ ನೋಟಿಸ್ ಸ್ವೀಕರಿಸಿದ್ದಾರೆ.
ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ.