HomeKarnatakaBREAKING: ಲಾರಿ-ಕಾರು ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ...

BREAKING: ಲಾರಿ-ಕಾರು ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ 3 ತಿಂಗಳ ಕಂದಮ್ಮ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಚಿತ್ರದುರ್ಗದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿಯಲ್ಲಿ ಇಂದು ಬೆಳಿಗ್ಗೆ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರು. ಮಗು ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 3 ತಿಂಗಳ ಕಂದಮ್ಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಯಿ ತಬ್ಸೂಮ್ (28), 3 ತಿಂಗಳ ಮಗು ಫಾತಿಮಾ ಹಾಗೂ ಸಂಬಂಧಿ ಜಾಕೀರ್ ಅಹ್ಮದ್ (60) ಮೃತರು. ಮೃತರು ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ನಿವಾಸಿಗಳು. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದಾಗ ದುರಂತ ಸಂಭವಿಸಿದೆ.

ಗಾಯಾಳುಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular