ವಿಜಯನಗರ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮನೆ ಛಿದ್ರ ಛಿದ್ರವಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಮನೆಯ ಸದಸ್ಯರು ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ.ಹಾಲಪ್ಪ, ಸೋದರ ಮೈಲಾರಪ್ಪ ಸೇರಿ 8 ಮಂದಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
You Might Also Like
TAGGED:ಗ್ಯಾಸ್