ವಿಜಯಪುರ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಪ್ರಮುಖ ಆರೋಪಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಬ್ಯಾಗ್ ಒಂದರಲ್ಲಿ ಖದೀಮರು ಕದ್ದಿದ್ದ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿತ್ತು, ಈ ಬೆನ್ನಲ್ಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ತನಿಖೆ ದೃಷ್ಟಿಯಿಂದ ಪ್ರಮುಖ ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ದರೋಡೆಗೆ ಸಹಾಯ ಮಾಡಿದ ಬಿಹಾರ ಮೂಲದ ರಾಕೇಶ್ ಕುಮಾರ್ ಸಹಾನಿ, ರಾಜಕುಮಾರ ಪಾಸ್ವಾನ್, ರಕ್ಷಕ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಒಟ್ಟು 1.4 ಕೋಟಿ ಚಿನ್ನ, 20 ಕೆಜಿ ಚಿನ್ನಾಭರಣ ದರೋಡೆಯಾಗಿತ್ತು. ಇತ್ತೀಚೆಗೆ ಪತ್ತೆಯಾದ ಬ್ಯಾಗ್ ನಲ್ಲಿ 1.30 ಲಕ್ಷ ನಗದು ಸಿಕ್ಕಿದೆ.ಮಹಾರಾಷ್ಟ್ರದ ಸೋಲಾಪುರ ಜಿಲ್ಲೆ ಮಂಗಳವೇಡ ತಾಲೂಕಿನ ಹುಲಜಂತಿ ಗ್ರಾಮದಲ್ಲಿ ಚಿನ್ನಾಭರಣದ ಬ್ಯಾಗ್ ಹಾಗೂ ದರೋಡೆಕೋರರ ಕೃತ್ಯಕ್ಕೆ ಬಳಸಿದ್ದ ಇಕೋ ವಾಹನ ಪತ್ತೆಯಾಗಿತ್ತು. ಗ್ರಾಮಕ್ಕೆ ನುಗ್ಗಿದ್ದ ಇಕೋ ವಾಹನಕ್ಕೆ ಬೈಕ್ ಡಿಕ್ಕಿಯಾಗಿತ್ತು. ಇದನ್ನು ಪ್ರಶ್ನಿಸಿದ್ದಕ್ಕೆ ಪಿಸ್ತೂಲ್ ತೋರಿಸಿ ದರೋಡೆಕೋರರು ಪರಾರಿಯಾಗಿದ್ದರು. ಇದೇ ವೇಳೆ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಎಸೆದು ಹೋಗಿದ್ದಾನೆ. ಮನೆ ಮೇಲ್ಛಾವಣಿಯಲ್ಲಿ ಬ್ಯಾಗ್ ಇಟ್ಟು ದರೋಡೆಕೋರನು ಹೋಗಿದ್ದನು.ಆ ಬ್ಯಾಗ್ ವಶಕ್ಕೆ ಪಡೆದಿದ್ದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಆರೋಪಿಗಳ ಬಂಧನವಾಗಿದೆ.