HomeKarnatakaBREAKING: ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

BREAKING: ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

ಶಿವಮೊಗ್ಗ : ವಿದ್ಯುತ್ ಪ್ರವಹಿಸಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಬೈಪಾಸ್ ರಸ್ತೆ ಊರುಗಡೂರು ಬಳಿ ನಡೆದಿದೆ.

ರಸ್ತೆಗೆ ಅಡ್ಡಲಾದ ಮರ ಕಟಾವ್ ಮಾಡುವಾಗ ಈ ದುರಂತ ಸಂಭವಿಸಿದೆ. ಗುಂಟೂರು ಮೂಲದ ಚಲ್ಲಾ ಸೋಮಶೇಖರ್, ಮತ್ತೊಬ್ಬರು ಮೃತ ದುರ್ದೈವಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರೂ ಕೂಲಿಕಾರ್ಮಿಕರಾಗಿದ್ದು, ರಸ್ತೆಗೆ ಅಡ್ಡಲಾಗಿದ್ದ ಮರ ಕಟಾವ್ ಮಾಡುವಾಗ ವಿದ್ಯುತ್ ಪ್ರವಹಿಸಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular