ವೇತನ ಪರಿಷ್ಕರಣೆ ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೆಪಿಟಿಸಿಎಲ್ ಮತ್ತು ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ನೌಕರರು ನಾಳೆಯಿಂದ ಅನಿರ್ದಿಷ್ಟವಾದ ಮುಷ್ಕರ ಕೈಗೊಳ್ಳಲು ಮುಂದಾಗಿದ್ದು, ಇದರ ಮಧ್ಯೆ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ.
ಕೆಪಿಟಿಸಿಎಲ್ ಹಾಗೂ ಇತರ ಎಸ್ಕಾಂ ಗಳ ನೌಕರರ ವೇತನ ಪರಿಷ್ಕರಣೆ ಕುರಿತು ಆರ್ಥಿಕ ಇಲಾಖೆ ನೀಡಿದ ಟಿಪ್ಪಣಿಯನ್ನು ಪರಿಶೀಲಿಸಿದ ಬಳಿಕ ಇಂಧನ ಸಚಿವ ಸುನಿಲ್ ಕುಮಾರ್, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅವರ ಮಾರ್ಗದರ್ಶನಂತೆ ವೇತನ ಪರಿಷ್ಕರಿಸಲು ಮುಂದಾಗಿದ್ದಾರೆ.
ಕೆಪಿಟಿಸಿಎಲ್ ಹಾಗೂ ಎಲ್ಲ ಐದು ಎಸ್ಕಾಂ ಗಳಲ್ಲಿ ಈಗಿರುವ ವೇತನದ ಮೇಲೆ ಶೇಕಡ 20ರಷ್ಟು ಹೆಚ್ಚಿಸಿ ಪರಿಷ್ಕರಣೆಗೆ ಸೂಚಿಸಲಾಗಿದ್ದು, ಏಪ್ರಿಲ್ 2022 ರಿಂದಲೇ ಇದು ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.