HomeCrimeBREAKING: ಶಿಕ್ಷಕಿ ಮಗನಿಂದ ಲವ್ ಮಾಡುವಂತೆ ಕಿರುಕುಳ; ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

BREAKING: ಶಿಕ್ಷಕಿ ಮಗನಿಂದ ಲವ್ ಮಾಡುವಂತೆ ಕಿರುಕುಳ; ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಲವ್ ಮಾಡುವಂತೆ ಶಿಕ್ಷಕಿಯ ಮಗ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಸಾರಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸಾರಾ ಹೊಸಕೋಟೆಯ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಳು. ಶಾಲೆಯ ಶಿಕ್ಷಕಿ ಮಗ ಸಾರಾ ಹಿಂದೆ ಬಿದ್ದು ಲವ್ ಮಾಡುವಂತೆ ಒತ್ತಾಯಿಸುತ್ತಿದ್ದ. ವಿದ್ಯಾರ್ಥಿನಿ ಒಪ್ಪದಿದ್ದಾಗ ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ಸಾರಾ ಪೋಷಕರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಶಿಕ್ಷಕಿಗೆ ದೂರು ನೀಡಿದ್ದರು ಮಗನಿಗೆ ಬುದ್ಧಿ ಹೇಳಿಲ್ಲ ಎನ್ನಲಾಗಿದೆ. ವಿದ್ಯಾರ್ಥಿನಿ ಸಾರಾ ಆತ್ಮಹತ್ಯೆಗೆ ಶಿಕ್ಷಕಿಯೂ ಪ್ರಚೋದನೆ ನೀಡಿದ್ದಾರೆ ಎಂದು ಪೋಷಕರು ದೂರು ನೀಡಿದ್ದಾರೆ. ಇದೀಗ ಶಿಕ್ಷಕಿಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular