ಬೆಂಗಳೂರು : ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ‘ಮಂಜುನಾಥ್ ಗೌಡ’ ನನ್ನು ಪೊಲೀಸರು ಬಂಧಿಸಿದ್ದಾರೆ.
ಏ.8 ರಂದು ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್ಹೌಸ್ ಮೇಲೂ ದಾಳಿ ನಡೆಸಲಾಗಿತ್ತು. ಇಂದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ, ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.2014 ರ ಜೂನ್ ನಲ್ಲಿ ನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಅಂದು ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೂ ಕೂಡ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ಮನೆ ಮೇಲೂ ಕೂಡ ಇಡಿ. ಅಧಿಕಾರಿಗಳು ನಡೆಸಿದ್ದರು. ಅಪೆಕ್ಸ್ ಬ್ಯಾಂಕ್ ಗೆಸ್ಟ್ ಹೌಸ್ ನಲ್ಲಿ ಅಧಿಕಾರಿಗಳು ಮಂಜುನಾಥ್ ಗೌಡ ಅವರ ವಿಚಾರಣೆ ನಡೆಸಿದ್ದರು. 2014 ರ ಜೂನ್ ನಲ್ಲಿ ನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಹಗರಣ ಭಾರಿ ಸುದ್ದಿಯಾಗಿತ್ತು. ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಲಾಗಿತ್ತು. ಇಡಿ ಅಧಿಕಾರಿಗಳು ಅವರನ್ನು 14 ದಿನ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.