BREAKING : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು : ಕೆಲವು ಸಚಿವರಿಗೆ ಕೊಕ್ ಸಾಧ್ಯತೆ..!

ನವದೆಹಲಿ : ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿಂದೆ ಎಂದು ಮೂಲಗಳು ತಿಳಿಸಿದೆ.

ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹೈಕಮಾಂಡ್ ಮಹತ್ವದ ಸಭೆ ನಡೆಸುತ್ತಿದೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿಂದೆ ಎಂದು ಮೂಲಗಳು ತಿಳಿಸಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಸಿಎಂ ಹಾಗೂ ಡಿಸಿಎಂ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.

ಈ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆ ಬಗ್ಗೆ ವಿವರಿಸಿದ್ದಾರೆ. ಘಟನೆ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ನ್ಯಾಯಾಂಗ ತನಿಖೆ, ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆಯೂ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read