HomeKarnatakaBREAKING: ಸಚಿವ ಸಂಪುಟ ಸಭೆ ಬಳಿಕ ‘ಗ್ಯಾರಂಟಿ ಯೋಜನೆ’ ಘೋಷಣೆ; ಸಚಿವ ರಾಮಲಿಂಗಾರೆಡ್ಡಿ ಸುಳಿವು

BREAKING: ಸಚಿವ ಸಂಪುಟ ಸಭೆ ಬಳಿಕ ‘ಗ್ಯಾರಂಟಿ ಯೋಜನೆ’ ಘೋಷಣೆ; ಸಚಿವ ರಾಮಲಿಂಗಾರೆಡ್ಡಿ ಸುಳಿವು

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ಬಳಿಕ ಗ್ಯಾರಂಟಿ ಯೋಜನೆಗಳು ( Congress Guarantee) ಘೋಷಣೆ ಆಗಲಿವೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ (CM siddramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ಬಳಿಕ 5 ಗ್ಯಾರಂಟಿ ಯೋಜನೆಗಳನ್ನು (5 Guarantee) ಘೋಷಣೆ ಮಾಡಲಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಗ್ಯಾರಂಟಿ ಬಗ್ಗೆ ಘೋಷಣೆ ಮಾಡಲಿದ್ದಾರೆ. ಕಾದು ನೋಡಿ ಮಧ್ಯಾಹ್ನ 1 ಗಂಟೆಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವ ಸಂಪುಟ ಸಭೆಗೂ ಮುನ್ನ ಹಿರಿಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಗ್ಯಾರಂಟಿ ಜಾರಿ ಮಾಡುವ ಕುರಿಂತೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular