HomeKarnatakaBREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ

BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ

ಬೆಂಗಳೂರು: ಲಿಂಗಾಯಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕೋರ್ಟ್ ವಜಾ ಮಾಡಿದೆ.

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಲಿಂಗಾಯಿತ ಸಿಎಂಗಳು ಭ್ರಷ್ಟರು ಎಂದು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಶಂಕರ್ ಶೇಟ್ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ಈ ಮೂಲಕ ಲಿಂಗಾಯಿತ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ, ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ವಜಾಗೊಳಿಸಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular