
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಿದ್ದರಾಮಯ್ಯ ಕರೆದು ಮಾತುಕತೆ ನಡೆಸಿದ್ದು, ಮಾತುಕತೆ ಬಳಿಕ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ರಾಹುಲ್ ಗಾಂಧಿ ಡಿ.ಕೆ.ಶಿವಕುಮಾರ್ ಜೊತೆಯೂ ಚರ್ಚೆ ನಡೆಸಲಿದ್ದು, ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇನಿರಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

