HomeLatest NewsBREAKING : 'ಸಿಗಂದೂರು ಸೇತುವೆ' ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ : CM ಸಿದ್ದರಾಮಯ್ಯ ಕಿಡಿ.!

BREAKING : ‘ಸಿಗಂದೂರು ಸೇತುವೆ’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ : CM ಸಿದ್ದರಾಮಯ್ಯ ಕಿಡಿ.!

ಬೆಂಗಳೂರು : ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ್ದೆ, ಜೊತೆಗೆ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರು, ಆದರೆ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೆಯೆ ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ.

ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲೀ, ಸಂಬಂಧಪಟ್ಟ ಇಲಾಖಾ ಸಚಿವರಿಗಾಗಲೀ, ಸ್ಥಳೀಯ ಶಾಸಕರಿಗಾಗಲೀ ಸರಿಯಾಗಿ ಆಮಂತ್ರಣ ನೀಡಿಲ್ಲ. ಸರ್ಕಾರಗಳ ನಡುವೆ ಹೀಗೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular