HomeKarnatakaBREAKING: ಸಿದ್ದರಾಮಯ್ಯ ಬಳಿಕ ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ. ಶಿವಕುಮಾರ್

BREAKING: ಸಿದ್ದರಾಮಯ್ಯ ಬಳಿಕ ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ. ಶಿವಕುಮಾರ್

ನವದೆಹಲಿ: ಕರ್ನಾಟಕ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.

ನವದೆಹಲಿಯ 10 ಜನಪಥ್ ನಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಆಗಮಿಸಿರುವ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಇದಕ್ಕೂ ಮುನ್ನ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಬ್ಬರು ನಾಯಕರೊಂದಿಗೆ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದು, ಕೆಲ ಹೊತ್ತಲ್ಲೇ ನೂತನ ಮುಖ್ಯಮಂತ್ರಿ ಹೆಸರು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular