HomeKarnatakaBREAKING: 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ; ಸಚಿವ ಅಶ್ವತ್ಥ ನಾರಾಯಣಗೆ ನೋಟೀಸ್...

BREAKING: ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ; ಸಚಿವ ಅಶ್ವತ್ಥ ನಾರಾಯಣಗೆ ನೋಟೀಸ್ ಜಾರಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ‘ಸಿದ್ದು ನಿಜ ಕನಸುಗಳು’ ಎಂಬ ಪುಸ್ತಕ ಬಿಡುಗಡೆಗೆ ಸಜ್ಜಾಗಿದ್ದ ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ.

ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಬಿಜೆಪಿ ನಾಯಕರು ಇಂದು ಸಿದ್ದರಾಮಯ್ಯ ವಿರುದ್ಧ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು. ಬಿಜೆಪಿಯಿಂದ ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ತಡೆ ಕೋರಿ ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್, ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಸಚಿವ ಅಶ್ವತ್ಥನಾರಾಯಣ ಸೇರಿ ಹಲವರಿಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular