HomeKarnatakaBREAKING: ಸಿಲಿಂಡರ್ ಸೋರಿಕೆಯಾಗಿ ಹೊತ್ತಿದ ಬೆಂಕಿ; ಪತಿ-ಪತ್ನಿ ಮಕ್ಕಳು ಸೇರಿ ನಾಲ್ವರಿಗೆ ಗಾಯ

BREAKING: ಸಿಲಿಂಡರ್ ಸೋರಿಕೆಯಾಗಿ ಹೊತ್ತಿದ ಬೆಂಕಿ; ಪತಿ-ಪತ್ನಿ ಮಕ್ಕಳು ಸೇರಿ ನಾಲ್ವರಿಗೆ ಗಾಯ

ಬೆಳಗಾವಿ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಸುಭಾಷ್ ಬಡಾವಣೆಯ ಮನೆಯಲ್ಲಿ ಈ ಅವಘಡ ಸಂಭವಿಸಿದೆ. NWKSRTC ನೌಕರ ಮಂಜುನಾಥ್, ಪತ್ನಿ ಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದು, ಮಕ್ಕಳಾದ ವೈಷ್ಣವಿ (13), ಸಾಯಿಪ್ರಸಾದ್ (10) ಸಣ್ಣ ಪುಟ್ಟ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಹಾ ಮಾಡಲೆಂದು ಲೈಟರ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular